Job Description: * 2020 ನೇ ಸಾಲಿನ ನ್ಯಾಷನಲ್ ಫ್ಲೋರೆನ್ಸ್ ನೈಟಿಂಗೆಲ್ ಅವಾರ್ಡ್ ನ್ನು ಕರ್ನಾಟಕ ರಾಜ್ಯದ ಹೊಸಕೋಟೆ ತಾಲೂಕಿನ ನಂದಗುಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಯಾಗಿರುವ ಮರಿಯಮ್ಮ ಅವರಿಗೆ ಲಭಿಸಿದೆ. * ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವರ್ಚುವಲ್ ಸಭೆಯ ಮೂಲಕ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಯಾಗಿರುವ ಮರಿಯಮ್ಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ, ಮೂಲತಃ ಇವರು ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿಯಾಗಿದ್ದಾರೆ, ಇದೀಗ ಇವರು ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. * ಮರಿಯಮ್ಮ ಅವರು 2007 ರಲ್ಲಿ ಉತ್ತಮ ಹೆಲ್ತ್ ಅಸಿಸ್ಟೆಂಟ್ ಅವಾರ್ಡ್, ಹಾಗೂ ಮತ್ತೇ 2011 ರಲ್ಲಿ ಬೆಸ್ಟ್ ಸಬ್ ಸೆಂಟರ್ ಅವಾರ್ಡ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.