Job Description: * ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಸಭೆಯ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗಿದೆ, ಈ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ನೀಡಿ ಗೌರವಿಸಿದ್ದಾರೆ. * ಈ ಮೊದಲು ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಲೋಕಸಭೆಯಲ್ಲಿ ನೀಡಲಾಗುತ್ತಿತ್ತು ಇದೀಗ ರಾಜ್ಯಸಭೆಯಲ್ಲಿಯೂ ನೀಡಲಾಗುತ್ತಿದೆ. * ಪ್ರಸ್ತುತ ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ಈ ಪ್ರಶಸ್ತಿಯನ್ನು ನೀಡುವ ಪ್ರಕ್ರಿಯೆ ಆರಂಭವಾಗಿದೆ, ಮುಂದಿನ ವರ್ಷದಿಂದ ಈ ಪ್ರಶಸ್ತಿ ಪ್ರಧಾನ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.