Job Description: * ಪ್ರಸ್ತುತ ಪಿಂಚಣಿ ನಿಯಂತ್ರಕ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಅಕ್ಟೋಬರ್. 1 ರಂದು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ದಿವಸ್ ಆಚರಿಸಲು ಸಿದ್ಧವಾಗಿದೆ. * ‘ಆಜಾದಿ ಕಾ ಅಮೃತ್ ಮಹೋತ್ಸವ’ ಅಡಿಯಲ್ಲಿ ಪಿಂಚಣಿ ಮತ್ತು ನಿವೃತ್ತಿ ಯೋಜನೆಯನ್ನು ಉತ್ತೇಜಿಸುವ ಸಲುವಾಗಿ ಈ ಅಭಿಯಾನವನ್ನು ಆರಂಭಿಸಲಾಗುವದು ಎಂದು ತಿಳಿಸಿದ್ದಾರೆ. * PFRDA ನಿವೃತ್ತಿಯ ನಂತರ ಆರ್ಥಿಕವಾಗಿ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರತಿಯೊಬ್ಬ ಪ್ರಜೆಗೂ ಈ ಯೋಜನೆಯನ್ನು ಉತ್ತೇಜಿಸಲು ಈ ಅಭಿಯಾನವನ್ನು ಆಯೋಜಿಸಲಾಗುತ್ತಿದೆ, ಅಷ್ಟೇ ಅಲ್ಲದೇ ಈ ಅಭಿಯಾನದ ಮೂಲಕ ಸಾರ್ವಜನಿಕರಿಗೆ ಪಿಂಚಣಿ ಯೋಜನೆಗಳ ಬಗೆಗಿನ ಮಾಹಿತಿಯನ್ನು ನೀಡಲಾಗುತ್ತದೆ. * ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಹಣಕಾಸು ಸಚಿವಾಲಯದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾಗಿದೆ. * 2003 ರ ಆಗಸ್ಟ್. 23 ರಂದು ಮಧ್ಯಂತರ ಪಿಂಚಣಿ ನಿಧಿ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರವು ಪಿಂಚಣಿ ವಲಯವನ್ನು ಸುಧಾರಿಸುವ ನಿಟ್ಟಿನಲ್ಲಿ ಇದನ್ನು ಭಾರತ ಸರ್ಕಾರವು ಅಂಗೀಕರಿಸಿ ಸ್ಥಾಪಿಸಿದೆ.