Job Description: * ಇತ್ತೀಚಿಗೆ ನ್ಯೂಯಾರ್ಕ್ ನಲ್ಲಿ ನಡೆದ 76 ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತೀಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಾಗತಿಕ ವೇದಿಕೆಯಿಂದ ಕೋವಿಡ್ ಗೆ ವಿಶ್ವದ ಮೊದಲ ಡಿಎನ್ಎ ಲಸಿಕೆಯನ್ನು ಘೋಷಣೆ ಮಾಡಿದ್ದಾರೆ. * ಪ್ರಸ್ತುತ ಭಾರತವು ವಿಶ್ವದ ಮೊದಲ ಡಿಎನ್ಎ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ, ಈ ಡಿಎನ್ಎ ಲಸಿಕೆಯನ್ನು 12 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಜನರಿಗೂ ನೀಡಬಹುದಾಗಿದೆ ಎಂದು ತಿಳಿಸಿದ್ದಾರೆ. * ದೇಶದ ಲಸಿಕೆ ಕಾರ್ಯಕ್ರಮದ ಭಾಗವಾಗಿ ಸ್ಥಳೀಯವಾಗಿ ಈ ಡಿಎನ್ಎ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ ಎಂದು ನೀತಿ ಆಯೋಗದ ಸದಸ್ಯ ಡಾ ವಿ ಕೆ ಪೌಲ್ ಸುದ್ದಿವಾಹಿನಿಗಳ ಮುಂದೆ ಮಾಹಿತಿಯನ್ನು ನೀಡಿದ್ದಾರೆ, ಅಷ್ಟೇ ಅಲ್ಲದೇ ಝೈಡಸ್ ಕ್ಯಾಡಿಲಾ ಅವರ ಡಿಎನ್ಎ ಲಸಿಕೆಯ ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ತರಲು ಎಲ್ಲ ಸಿದ್ಧತೆಗಳುನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.