Job Description: * ಪ್ರಸ್ತುತ 'ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಯರಗೋಳ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. * ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 15 ರಂದು 75 ನೇ ಸ್ವಾತಂತ್ರ್ಯತ್ಸೋವದ ಸವಿ ನೆನಪಿಗಾಗಿ ಅಮೃತ ಗ್ರಾಮ ಪಂಚಾಯಿತಿ ಯೋಜನೆಯನ್ನು ಘೋಷಣೆ ಮಾಡಿದ್ದರು. * ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಇದೇ ಸೆಪ್ಟೆಂಬರ್. 23 ರಂದು 'ಅಮೃತ ಗ್ರಾಮ ಪಂಚಾಯಿತಿ ಯೋಜನೆ'ಗೆ ಚಾಲನೆಯನ್ನು ನೀಡಿದ್ದರು. * ಈ 'ಅಮೃತ ಗ್ರಾಮ ಪಂಚಾಯಿತಿ ಯೋಜನೆ'ಗೆ ಯಾದಗಿರಿ ಜಿಲ್ಲೆಯಿಂದ 14 ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿವೆ ಎಂದು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. * ಈ 'ಅಮೃತ ಗ್ರಾಮ ಪಂಚಾಯಿತಿ ಯೋಜನೆ'ಗೆ ಆಯ್ಕೆಯಾದ ಪ್ರತಿ ಗ್ರಾಮ ಪಂಚಾಯಿತಿಗಳ, ಬೀದಿ ದೀಪಗಳ ಅಳವಡಿಕೆ, ಕುಡಿಯುವ ನೀರಿನ ನಳ, ಶೇ. 100 ರಷ್ಟು ಘನ ತ್ಯಾಜ್ಯ ವಿಂಗಡಣೆ ಮತ್ತು ವಿಲೆವಾರಿ, ಅಲ್ಲಿನ ಪಂಚಾಯಿತಿ ಕಟ್ಟಡಗಳಿಗೆ ಸೌರ ವಿದ್ಯುತ್ ಅಳವಡಿಕೆ ಮಾಡುವದು, ಉದ್ಯಾನ ವನಗಳ ನಿರ್ಮಾಣ, ಗ್ರಂಥಾಲಯಗಳ ಡಿಜಿಟಲಿಕರಣ, ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಕುಡಿಯುವ ನೀರು ಮತ್ತು ಶೌಚಾಲಯಗಳಿಗೆ ಸೌಲಭ್ಯವನ್ನು ನೀಡುವುದು, ಅಷ್ಟೇ ಅಲ್ಲದೇ ರೈತರ ಕೃಷಿ ಉಪಯೋಗಗಳಿಗೆ ಅನುಕೂಲವಾಗುವಂತೆ ಗೋದಾಮು ನಿರ್ಮಾಣ, ಕೆರೆಗಳ ಶುದ್ಧಿಕರಣ ಮಾಡುವುದು ಹೀಗೆ ಹಲವಾರು ಕಾರ್ಯಗಳು ಈ ಯೋಜನೆಯಲ್ಲಿ ಸೇರಿವೆ. * ಪ್ರಸ್ತುತ ಈ 'ಅಮೃತ ಗ್ರಾಮ ಪಂಚಾಯಿತಿ ಯೋಜನೆ' ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ಹೆಚ್ಚುವರಿಯಾಗಿ 25 ಲಕ್ಷ ರೂ. ಹಣವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.