Job Description: * ಕೇಂದ್ರ ಸಚಿವ ಸಂಪುಟವು ಪ್ರಸ್ತುತ ದೇಶದಾದ್ಯಂತ ಇರುವ ಸರ್ಕಾರಿ ಹಾಗೂ ಅನುದಾನಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಬಿಸಿಯೂಟ ನೀಡುವ 'ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್' ಯೋಜನೆಗೆ ಅನುಮೋದನೆ ನೀಡಿದೆ. * ಸದ್ಯ ದೇಶದಲ್ಲಿ ಚಾಲ್ತಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು 'ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್' ಯೋಜನೆಯಲ್ಲಿ ವಿಲೀನಗೊಳಿಸಲಾಗುವುದು, ಹಾಗೂ ಈ ಯೋಜನೆಯು 2021 ರಿಂದ 2026 ವರೆಗೆ ಜಾರಿಯಲ್ಲಿರಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರು ತಿಳಿಸಿದ್ದಾರೆ. * ಪ್ರಸ್ತುತ ಈ 'ಪಿಎಂ ಪೋಷಣ್' ಯೋಜನೆಯು ದೇಶದಲ್ಲಿನ 11.20 ಲಕ್ಷ ಶಾಲೆಗಳ 11.80 ಕೋಟಿ ಮಕ್ಕಳಿಗೆ ಇದರ ಪ್ರಯೋಜನ ಲಭ್ಯವಾಗಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಿಳಿಸಿದ್ದಾರೆ. * ಕೇಂದ್ರ ಸರ್ಕಾರವು ಒಟ್ಟಾರೆ 1,30,794.90 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ ಎಂದು ತಿಳಿದು ಬಂದಿದೆ. * ಕೇಂದ್ರ ಸರ್ಕಾರದ ಈ ಯೋಜನೆ ಅಡಿಯಲ್ಲಿ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ 1 ರಿಂದ 8 ತರಗತಿಯ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.