Job Description: * ಪ್ರಸ್ತುತ ಚಿತ್ರದುರ್ಗದಲ್ಲಿನ ಮುರುಘಾಮಠ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರಧಾನ ಮಾಡಲಾಗುವ 'ಬಸವಭೂಷಣ' ಪ್ರಶಸ್ತಿಗೆ ಪ್ರಸ್ತುತ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ, ಅದೇ ರೀತಿ 'ಶರಣಶ್ರೀ' ಪ್ರಶಸ್ತಿಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. * ಪ್ರಸ್ತುತ ಈ ಪ್ರಶಸ್ತಿ ಪ್ರಧಾನವು ಇದೆ ಅಕ್ಟೋಬರ್.18 ರಂದು ಮುರುಘಾಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೀಡಲಾಗುತ್ತದೆ ಎಂದು ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ. * ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ 7 ವಿಶ್ವದಾಖಲೆ ನಿರ್ಮಿಸಿದ ಉಡುಪಿಯ ಬಾಲ ಪ್ರತಿಭೆ ತನುಶ್ರೀ ಅವರನ್ನು ಭರಮಣ್ಣನಾಯಕ ಶೌರ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ, ಅಷ್ಟೇ ಅಲ್ಲದೇ ಮುರುಘಾಶ್ರೀ ಹಾಗೂ ಶೌರ್ಯ ಪ್ರಶಸ್ತಿಯು 25 ಸಾವಿರ ರೂ. ಮತ್ತು ಪ್ರಶಸ್ತಿ ಫಲಕವನ್ನು ನೀಡಲಾಗುತ್ತದೆ. * ಪ್ರಸ್ತುತ ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಮತ್ತು ಬಾಹ್ಯಾಕಾಶ ವಿಜ್ಞಾನಿ ಕೆ.ಕಸ್ತೂರಿ ರಂಗನ್ ಅವರನ್ನು 'ಬಸವಶ್ರೀ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ, ಈ ಪ್ರಶಸ್ತಿಯನ್ನು ಇದೆ ಅಕ್ಟೋಬರ್. 17 ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದಿದ್ದಾರೆ.