Job Description: * ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್. 02 ರಂದು 'ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ' (Best State Combating Covid-19) ವಿಭಾಗದ ಇಂಡಿಯಾ ಟುಡೇ ಹೆಲ್ತ್ ಗಿರಿ ಪ್ರಶಸ್ತಿ'ಗೆ ಕರ್ನಾಟಕ ರಾಜ್ಯ ಆಯ್ಕೆಯಾಗಿದೆ, ಈ ಪ್ರಶಸ್ತಿಯನ್ನು 'ದಿ ಇಂಡಿಯಾ ಟುಡೇ ಗ್ರೂಪ್ ಪ್ರಧಾನ ಮಾಡಿದೆ, ಈ ಪ್ರಶಸ್ತಿಯನ್ನು ರಾಜ್ಯ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಈ ಪ್ರಶಸ್ತಿ ಸ್ವೀಕಾರ ಮಾಡಿದರು. * ಕರ್ನಾಟಕ ರಾಜ್ಯವು ಈ ಹಿಂದೆ ಕಳೆದ ಒಂದೂವರೆ ವರ್ಷದಿಂದ ಕೋವಿಡ್-19 ವಿರುದ್ಧ ಹೋರಾಟ ನಡೆಸುತ್ತಿದೆ, ಈ ಹಿನ್ನೆಲೆಯಿಂದಾಗಿ ರಾಜ್ಯಕ್ಕೆ ಪ್ರಶಸ್ತಿ ಲಭಿಸಿದೆ. * ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು, ಕರ್ನಾಟಕ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.