Job Description: * ಇದೇ ಮೊದಲ ಬಾರಿಗೆ ಬಾಹ್ಯಾಕಾಶದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ರೋಸ್ಕೋಸ್ಮೀಸ್ ಅನುಮತಿ ನೀಡಿದೆ. * ಪ್ರಸ್ತುತ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ನಟಿ ಯೂಲಿಯಾ ಪೆರೆಸಿಲ್ಡ್, ನಿರ್ದೇಶಕ ಕ್ಲಿಮ್ ಶಿಪೆಂಕೊ ಮತ್ತು ಗಗನಯಾತ್ರಿ ಆಂಟನ್ ಶಕಾಪ್ಲೆರೋವ್ ಅವರು ಸಿನಿಮಾ ಚಿತ್ರೀಕರಣಕ್ಕಾಗಿ ಪ್ರಯಾಣ ಬೆಳಸಲಿದ್ದಾರೆ ಎಂದು ರಷ್ಯಾದ ರಾಜ್ಯ ಬಾಹ್ಯಾಕಾಶ ನಿಗಮ ರೋಸ್ಕೋಸ್ಮೋಸ್ ಮಾಹಿತಿ ನೀಡಿದೆ. * ಕಳೆದ ನವೆಂಬರ್ನಲ್ಲಿ ಬಾಹ್ಯಾಕಾಶದಲ್ಲಿ ಚಲನಚಿತ್ರದ ನಿರ್ಮಾಣದ ಯೋಜನೆಯನ್ನು ರೋಸ್ಕೋಸ್ಮೋಸ್ ಹಾಗೂ ರಷ್ಯಾದ ಚಾನೆಲ್ ಒನ್ ಅನಾವರಣಗೊಳಿಸಿತು. * ಈ ಸಿನಿಮಾ ಚಿತ್ರೀಕರಣಕ್ಕಾಗಿ ಬಾಹ್ಯಾಕಾಶ ತೆರಳಲು ಸೊಯುಜ್ ಎಂಎಸ್ -19 ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಗುವುದು, ಮತ್ತೆ ಅದೇ ಸೋಯುಜ್ ಎಂಎಸ್ -18 ಮೂಲಕ ಭೂಮಿಗೆ ವಾಪಸಾಗಲಿದ್ದಾರೆ ಎಂದು ತಿಳಿದು ಬಂದಿದೆ.