Job Description: * ಮಹಾರಾಷ್ಟ್ರ ರಾಜ್ಯ ಸರ್ಕಾರವು ಇದೇ ಅಕ್ಟೋಬರ್. 8 ರಿಂದ 14 ರವರೆಗೆ 'ಮಿಷನ್ ಕವಚ ಕುಂಡಲ' ಎಂಬ ವಿಶೇಷ ಲಸಿಕಾ ಕಾರ್ಯಕ್ರಮವನ್ನು ಆರಂಭಿಸಲಿದೆ ಎಂದು ಮಹಾರಾಷ್ಟ್ರ ರಾಜ್ಯ ಆರೋಗ್ಯ ಸಚಿವ ರಾಜೇಶ್ ತೋಪೆ ಅವರು ಮಾಹಿತಿ ನೀಡಿದ್ದಾರೆ. * ಪ್ರಸ್ತುತ ಕೇಂದ್ರ ಸರ್ಕಾರವು ಇದೇ ಅಕ್ಟೋಬರ್. 15 ರೊಳಗೆ 100 ಕೋಟಿ ಜನರಿಗೆ ಕೋವಿಡ್-19 ಲಸಿಕೆ ಹಾಕುವ ಗುರಿ ಹೊಂದಿದೆ ಈ ಕಾರಣದಿಂದಾಗಿ 'ಮಿಷನ್ ಕವಚ ಕುಂಡಲ' ಎಂಬ ವಿಶೇಷ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. * ಈ ಲಸಿಕಾ ಅಭಿಯಾನದಿಂದ ಪ್ರತಿದಿನವು ಸುಮಾರು 15 ಲಕ್ಷ ಜನರಿಗೆ ಕೋವಿಡ್-19 ಲಸಿಕೆ ಹಾಕುವ ಗುರಿಯನ್ನು ಹೊಂದಿದ್ದೇವೆ ಎಂದು ತೋಪೆ ಅವರು ತಿಳಿಸಿದ್ದಾರೆ. * ಪ್ರಸ್ತುತ ಮಹಾರಾಷ್ಟ್ರ ರಾಜ್ಯದಲ್ಲಿ ಇಲ್ಲಿಯವರೆಗೆ 8.54 ಕೋಟಿ ಜನರಿಗೆ ಕೋವಿಡ್-19 ಲಸಿಕೆ ಹಾಕಲಾಗಿದೆ ಎಂದು ತಿಳಿಸಿದ್ದಾರೆ.