Job Description: * ಪ್ರಸ್ತುತ 'ರಾಷ್ಟ್ರೀಯ ಹಸಿರು ನ್ಯಾಯಮಂಡಳಿ' (NGT)ಯು ಪರಿಸರ ಹಿತರಕ್ಷಣೆಗಾಗಿ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಳ್ಳುವ ಅಧಿಕಾರ ಹೊಂದಿದೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. * ಪ್ರಸ್ತುತ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು, ಸಾರ್ವಜನಿಕರ ದೂರು ಹಾಗೂ ಮಾಧ್ಯಮಗಳ ವರದಿಗಳ ಆಧಾರದ ಮೇಲೆ ಪರಿಸರಕ್ಕೆ ಸಂಬಂಧಪಟ್ಟ ವಿಷಯಗಳ ಮೇಲೆ ತನಿಖೆಯನ್ನು ನಡೆಸಬಹುದಾಗಿದೆ ಎಂದು ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್, ಹೃಷಿಕೇಶ್ ರಾಯ್ ಹಾಗೂ ಸಿ.ಟಿ. ರವಿಕುಮಾರ್ ಅವರ ಪೀಠವು ಈ ಮಹತ್ವದ ತೀರ್ಪುನ್ನು ನೀಡಿದೆ. * ಈ ಮೊದಲು ಕೇಂದ್ರ ಸರ್ಕಾರವು NGT ಗೆ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಳ್ಳುವ ಅಧಿಕಾರವಿಲ್ಲ, ಆದರೆ ಸಂವಿಧಾನಿಕ ಪೀಠಗಳಿಗೆ ಮಾತ್ರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವ ಅಧಿಕಾರ ಇದೆ ಎಂದು ಆಕ್ರೋಶವನ್ನು ಹೊರಹಾಕಿತ್ತು, ಆದರೆ ಕೇಂದ್ರದ ಈ ವಾದವನ್ನು ಮಾನ್ಯ ಮಾಡದ ನ್ಯಾಯಾಲಯ NGT ಗೆ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಳ್ಳುವ ಅಧಿಕಾರ ಇದೆ ಎಂದು ತಿಳಿಸಿದೆ.