Job Description: * ಪ್ರಸ್ತುತ ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಖರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರಾಗಿ ನೇಮಕವಾಗಿದ್ದಾರೆ. * ಅಮಿತ್ ಖರೆ ಅವರು ಇತ್ತೀಚಿಗೆ ಇವರು ಸೆಪ್ಟೆಂಬರ್ 30ರಂದು ಕೇಂದ್ರದ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಸ್ಥಾನದಿಂದ ನಿವೃತ್ತರಾಗಿದ್ದರು, ಅಷ್ಟೇ ಅಲ್ಲದೇ ಇವರು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮತ್ತು ಮಾಹಿತಿ, ಪ್ರಸಾರ ಸಚಿವಾಲಯದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. * ಪ್ರಸ್ತುತ ಕೇಂದ್ರ ಸಂಪುಟದ ನೇಮಕಾತಿಗಳ ಸಮಿತಿಯು ಪ್ರಧಾನಿ ಸಲಹೆಗಾರರಾಗಿ ಅಮಿತ್ ಖರೆ ಅವರ ನೇಮಕಾತಿಗೆ ಅನುಮೋದನೆ ನೀಡಿದೆ. * ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಖರೆ ಅವರಿಗೆ ಭಾರತ ಸರ್ಕಾರದ ಕಾರ್ಯದರ್ಶಿ ದರ್ಜೆಯ ಸ್ಥಾನಮಾನ ನೀಡಲಾಗುತ್ತದೆ, ಅಲ್ಲದೇ ಇವರು ಎರಡು ವರ್ಷ ಅಥವಾ ಭಾರತ ಸರ್ಕಾರದ ಮುಂದಿನ ಆದೇಶದವರೆಗೂ ಈ ಸ್ಥಾನದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. * ಪ್ರಸ್ತುತ ಕೇಂದ್ರ ಸಂಪುಟದ ಮಾಜಿ ಕಾರ್ಯದರ್ಶಿ ಪಿ.ಕೆ.ಸಿನ್ಹಾ ಹಾಗೂ ಮಾಜಿ ಕಾರ್ಯದರ್ಶಿ ಅಮರ್ಜೀತ್ ಸಿನ್ಹಾ ಅವರು ಇದೇ ವರ್ಷದಲ್ಲಿ ಪ್ರಧಾನ ಮಂತ್ರಿ ಸಲಹೆಗಾರ ಸ್ಥಾನದಿಂದ ನಿವೃತ್ತರಾಗಿದ್ದಾರೆ ಇದೀಗ ಇವರ ಈ ಸ್ಥಾನಕ್ಕೆ ಐಎಎಸ್ ಅಧಿಕಾರಿ ಅಮಿತ್ ಖರೆ ಅವರನ್ನು ನೇಮಕ ಮಾಡಲಾಗಿದೆ.