Job Description: * ಕನ್ನಡದ ಹಿರಿಯ ನಟ ಪ್ರೊ. ಜಿ.ಕೆ. ಗೋವಿಂದ ರಾವ್ ಅವರು ವಿಧಿವಶರಾಗಿದ್ದಾರೆ. * ಜಿ.ಕೆ. ಗೋವಿಂದ ರಾವ್ ಅವರು ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು ಹಾಗೂ ಇವರು ರಂಗಭೂಮಿ ಕಲಾವಿದರಾಗಿದ್ದರು, ಮಾಲ್ಗುಡಿ ಡೇಸ್, ಮಹಾಪರ್ವ ಎಂಬ ಧಾರಾವಾಹಿ ಹಾಗೂ ಅನೇಕ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. * ಹಿರಿಯ ನಟ ಪ್ರೊ. ಜಿ.ಕೆ. ಗೋವಿಂದ ರಾವ್ ಅವರು ಈಶ್ವರ ಅಲ್ಲಾ ಎಂಬ ಕಿರು ಕಾದಂಬರಿ, ಶೇಕ್ಸ್ಪೀಯರ್ ನಾಟಕ ಅಧ್ಯಯನ, ಶೇಕ್ಸ್ಪೀಯರ್ ಸಂವಾದ ಲೇಖನ ಮಾಲಿಕೆ, ನಡೆ ನುಡಿ ನಾಗರಿಕತೆ, ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್ ಮುಂತಾದ ಹಲವು ಕೃತಿಗಳನ್ನು ರಚಿಸಿದ್ದಾರೆ. * ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಕನ್ನಡದ ಹಿರಿಯ ನಟ, ಚಿಂತಕ, ಪ್ರೊ.ಜಿ.ಕೆ ಗೋವಿಂದ ರಾವ್ ಅವರ ನಿಧನಕ್ಕೆ ಸಂತಾಪವನ್ನು ಸೂಚಿಸಿದ್ದಾರೆ.