Job Description: * ಇದೀಗ ಭಾರತವು ಕೋವಿಡ್-19 ಲಸಿಕೆಗಳನ್ನು ನೇಪಾಳ, ಮ್ಯಾನ್ಮಾರ್ ಮತ್ತು ಇರಾನ್ ರಾಷ್ಟ್ರಗಳಿಗೆ ರಫ್ತು ಮಾಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. * ನೆರೆ ರಾಷ್ಟ್ರಗಳಿಗೆ ಕೋವಿಡ್ ಲಸಿಕೆಗಳನ್ನು ರಫ್ತು ಮಾಡುವುದನ್ನು ಭಾರತ ಸರ್ಕಾರ ಮತ್ತೆ ಆರಂಭಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಹೇಳಿದ್ದಾರೆ. * ಪ್ರಸ್ತುತ ಭಾರತವು ವಿಶ್ವದಲ್ಲೇ ಅತೀ ಹೆಚ್ಚು ಲಸಿಕೆಗಳನ್ನು ಉತ್ಪಾದಿಸುವ ರಾಷ್ಟ್ರವಾಗಿದೆ. * ಇದೀಗ ಭಾರತದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನಲೆಯಲ್ಲಿ, ಕೋವಿಡ್-19 ಲಸಿಕೆಗಳನ್ನು ವಿದೇಶಗಳಿಗೆ ರಫ್ತು ಮಾಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ ಮಾಹಿತಿ ನೀಡಿದ್ದಾರೆ.