Job Description: * ಪ್ರಸ್ತುತ ಕೇರಳದ ತಿರುವನಂತಪುರಂನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವನ್ನು ಅದಾನಿ ಗ್ರೂಪ್ ತನ್ನ ವಶಕ್ಕೆ ಪಡೆದುಕೊಂಡಿದೆ. * ಪ್ರಸ್ತುತ ಕೇರಳ ರಾಜ್ಯದಲ್ಲಿ ಅಧಿಕಾರದಲ್ಲಿರುವ ಎಲ್ಡಿಎಫ್ ಪಕ್ಷ ಮತ್ತು ಯುಡಿಎಫ್ ಎಂಬ ವಿರೋಧ ಪಕ್ಷಗಳು ಇದನ್ನು ವಿರೋಧಿಸಿ ಪ್ರತಿಭಟನೆಯನ್ನು ನಡೆಸಿವೆ, ಇದರ ನಡುವೆಯೂ ಈ ವಿಮಾನ ನಿಲ್ದಾಣದ ಆಡಳಿತವನ್ನು ಅದಾನಿ ಗ್ರೂಪ್ ತನ್ನ ವಶಕ್ಕೆ ಪಡೆದುಕೊಂಡಿದೆ. * ಕೇರಳದ ತಿರುವನಂಪುರಂನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು 1932ರಲ್ಲಿ ಸ್ಥಾಪಿಸಲಾಗಿದೆ, ಇಲ್ಲಿಯವರೆಗೂ ಈ ನಿಲ್ದಾಣವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಡಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿತ್ತು, ಆದರೆ ಇದೀಗ ಅದಾನಿ ಗ್ರೂಪ್ ಈ ವಿಮಾನ ನಿಲ್ದಾಣದ ನಿರ್ವಹಣೆಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.