Job Description: * ಪ್ರಸ್ತುತ ಆಫ್ಘಾನಿಸ್ತಾನಿನ ತಾಲಿಬಾನ್ ಪೋಲಿಯೊ ಲಸಿಕಾ ಅಭಿಯಾನವನ್ನು ಬೆಂಬಲಿಸಲು ಒಪ್ಪಿಗೆ ನೀಡಿದ್ದಾರೆ, ಅಷ್ಟೇ ಅಲ್ಲದೇ ಅಫ್ಗಾನಿಸ್ತಾನ ರಾಷ್ಟ್ರದಲ್ಲಿ ಮುಂದಿನ ತಿಂಗಳು ಆರೋಗ್ಯ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಪೋಲಿಯೊ ಲಸಿಕಾ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಹಾಗೂ ಯುನಿಸೆಫ್ ತಿಳಿಸಿವೆ. * ಸದ್ಯ ಇದೀಗ ಅಫ್ಗಾನಿಸ್ತಾನ ಹಾಗೂ ಪಾಕಿಸ್ತಾನದಲ್ಲಿ ಈಗಲೂ ಪೋಲಿಯೊ ಇದೆ. * ಅಫ್ಗಾನಿಸ್ತಾನ 30 ಲಕ್ಷಕ್ಕಿಂತ ಹೆಚ್ಚಿನ ಮಕ್ಕಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಿದೆ, ಇದೇ ನವೆಂಬರ್ 8 ರಿಂದ ಪೋಲಿಯೊ ಲಸಿಕಾ ಅಭಿಯಾನ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ. * ಪೋಲಿಯೊ ಲಸಿಕೆಯ 2ನೇ ಅಭಿಯಾನ ಡಿಸೆಂಬರ್ ತಿಂಗಳಿನಲ್ಲಿ ಪಾಕಿಸ್ತಾನದಲ್ಲಿಯು ಆರಂಭಿಸಲು ಒಪ್ಪಿಗೆ ನೀಡಲಾಗಿದೆ. * ಇದೀಗ ಅಫ್ಗಾನಿಸ್ತಾನ ಲಸಿಕೆ ನೀಡುವ ಮೂಲಕ ಪೋಲಿಯೊವನ್ನು ನಿರ್ಮೂಲನೆ ಮಾಡುವ ಉದ್ದೇಶವನ್ನು ಹೊಂದಿದೆ ಎನ್ನಲಾಗಿದೆ.