Job Description: * ಸದ್ಯ ಕೇಂದ್ರ ಸರ್ಕಾರವು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 102 ಕೋಟಿ ಡೋಸ್ ಕೋವಿಡ್-19 ಲಸಿಕೆಯನ್ನು ವಿತರಣೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. * ಭಾರತದಲ್ಲಿ ಜನೇವರಿ. 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೋವಿಡ್-19 ಲಸಿಕೆಗಳಿಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ, ಈ ಲಸಿಕೆಗಳನ್ನು ಮೊದಲಿಗೆ ಕೋರೋಣ ವಾರಿಯರ್ಸ್'ಗೆ ಕ್ರಮೇಣವಾಗಿ 45 ವರ್ಷ ಮೇಲ್ಪಟ್ಟ ನಾಗರೀಕರಿಗೆ, ಹಾಗೂ ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲ ಪ್ರಜೆಗಳಿಗೂ ಲಸಿಕೆ ನೀಡಲು ಆರಂಭಿಸಲಾಗಿದೆ. * ಪ್ರಸ್ತುತ ಲಸಿಕೆ ಅಭಿಯಾನ ಪ್ರಾರಂಭದಿಂದ ಇಲ್ಲಿಯವರೆಗೆ ಒಟ್ಟು 97,79,47,783 ಜನರಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.