Job Description: * ಪ್ರಸ್ತುತ ವಿಶ್ವದಾದ್ಯಂತ ರಕ್ಷಣಾ ಉತ್ಪನ್ನಗಳನ್ನು ರಫ್ತು ಮಾಡುವ ಅಗ್ರ 25 ದೇಶಗಳ ಪಟ್ಟಿಯಲ್ಲಿ ಭಾರತವು ಸ್ಥಾನ ಪಡೆದುಕೊಂಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. * ಈ ಮಾಹಿತಿಯನ್ನು ಸ್ಟಾಕ್ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ ವರದಿ ಮಾಡಿದೆ. * 2024-25 ರೊಳಗೆ ಭಾರತವು ರಕ್ಷಣಾ ವಸ್ತುಗಳ ರಫ್ತನ್ನು ಹೆಚ್ಚಿಸುವ ನಿಟ್ಟಿನಲ್ಲಿ ಭಾರತವನ್ನು ಜಾಗತಿಕ ರಕ್ಷಣಾ ಪೂರೈಕೆ ಸರಪಳಿಯ ಅಂಗವಾಗಿಸಲು ಭಾರತವು 35,000 ಕೋಟಿ ರೂ. ಏರೋಸ್ಪೇಸ್ ಮತ್ತು ಉತ್ತಮ ರಕ್ಷಣಾ ಸೇವೆಗಳನ್ನು ಒದಗಿಸುವ ಗುರಿ ಹೊಂದಿದ್ದೇವೆ' ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ. * ಪ್ರಸ್ತುತ ರಕ್ಷಣಾ ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿರುವ 9 ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಗಳು: ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಭಾರತ್ ಡೈನಾಮಿಕ್ಸ್ ಲಿಮಿಟೆಡ್, ಬಿಇಎಂಎಲ್ ಲಿಮಿಟೆಡ್, ಮಿಶ್ರ ಧಾತು ನಿಗಮ್ ಲಿಮಿಟೆಡ್, ಮಜಗಾಂವ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್, ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಮತ್ತು ಇಂಜಿನಿಯರ್ಸ್ ಲಿಮಿಟೆಡ್, ಗೋವಾ ಶಿಪ್ ಯಾರ್ಡ್ ಲಿಮಿಟೆಡ್ ಮತ್ತು ಹಿಂದುಸ್ತಾನ್ ಶಿಪ್ ಯಾರ್ಡ್ ಲಿಮಿಟೆಡ್. * 2020 ರ ಆಗಸ್ಟ್'ನಲ್ಲಿ ಕೇಂದ್ರ ಸರ್ಕಾರದ 'ಆತ್ಮ ನಿರ್ಭರ ಭಾರತ್ ಅಭಿಯಾನ' ಅನುಸಾರವಾಗಿ ರಕ್ಷಣಾ ವಲಯದಲ್ಲಿ ದೇಶೀಕರಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ 101 ಐಟಂಗಳನ್ನು ಹೊಂದಿರುವ ಮೊದಲ ಧನಾತ್ಮಕ ಸ್ವದೇಶೀಕರಣ ಪಟ್ಟಿಯನ್ನು ಸೂಚಿಸಲಾಗಿದೆ. * ರಾಷ್ಟ್ರ ರಾಜಧಾನಿಯಲ್ಲಿ 2021 ರ ಅಕ್ಟೋಬರ್. 15 ರಂದು ಅಂದರೆ 'ವಿಜಯದಶಮಿ' ದಂದು ಕೇಂದ್ರ ರಕ್ಷಣಾ ಸಚಿವಾಲಯ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಆರ್ಡನೆನ್ಸ್ ಫ್ಯಾಕ್ಟರಿ ಬೋರ್ಡ್ (OFB)ನ 7 ಹೊಸ ರಕ್ಷಣಾ ಕಂಪನಿಗಳನ್ನು ದೇಶಕ್ಕೆ ಸಮರ್ಪಿಸಲಾಗಿದೆ.