Job Description: * ಪ್ರಸ್ತುತ ಪ್ರಧಾನಮಂತ್ರಿ ಗತಿ ಶಕ್ತಿ - ರಾಷ್ಟ್ರೀಯ ಮಾಸ್ಟರ್ ಪ್ಲಾನ್(PM Gati Shakti-National Master Plan)ನ್ನು ಕೇಂದ್ರ ಸಚಿವ ಅನುಮೋದಿಸಿದೆ, ಇದು ಆರ್ಥಿಕ ವಲಯಗಳಿಗೆ ಬಹು ಮಾದರಿ ಸಂಪರ್ಕ ಕಲ್ಪಿಸುವ ಉದ್ದೇಶವನ್ನು ಹೊಂದಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಬಹು ಮಾದರಿ ಸಂಪರ್ಕಕ್ಕಾಗಿ 100 ಲಕ್ಷ ಕೋಟಿ ರೂ.ಗಳ ರಾಷ್ಟ್ರೀಯ ಮಾಸ್ಟರ್ ಯೋಜನೆಯನ್ನು ಆರಂಭಿಸಿದ್ದಾರೆ. * ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಪ್ರಧಾನಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ʼಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ತಿಳಿಸಿದ್ದಾರೆ, ಹಾಗೂ ಇದು ಬಹು ಮಾದರಿ ಸಂಪರ್ಕ ಒದಗಿಸಲು ಸಾಂಸ್ಥಿಕ ಚೌಕಟ್ಟು, ಅನುಷ್ಠಾನ, ಮೇಲ್ವಿಚಾರಣೆ ಮತ್ತು ಬೆಂಬಲ ವ್ಯವಸ್ಥೆಯನ್ನು ಒದಗಿಸಲಿದೆ. * ಪ್ರಸ್ತುತ 3 ಹಂತಗಳ ವ್ಯವಸ್ಥೆಯಲ್ಲಿ ಈ ಪ್ರಧಾನಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.