Job Description: * ಪ್ರಸ್ತುತ ಉತ್ತರ ಪ್ರದೇಶ ಸರ್ಕಾರವು ಫೈಜಾಬಾದ್ ರೈಲ್ವೆ ನಿಲ್ದಾಣಕ್ಕೆ ಮರುನಾಮಕರಣ ಮಾಡಲು ತೀರ್ಮಾನಿಸಿದೆ, ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಟ್ವೀಟರ್ ಖಾತೆಯ ಮೂಲಕ ಮಾಹಿತಿ ನೀಡಿದ್ದಾರೆ. * ಉತ್ತರ ಪ್ರದೇಶದ ಈ ಫೈಜಾಬಾದ್ ರೈಲ್ವೆ ನಿಲ್ದಾಣಕ್ಕೆ ಅಯೋಧ್ಯೆ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಎಂದು ಮರುನಾಮಕರಣ ಮಾಡಲು ಉತ್ತರ ಪ್ರದೇಶ ಸರ್ಕಾರದ ಮುಖ್ಯಮಂತ್ರಿ ಕಾರ್ಯಾಲಯ ಮಾಹಿತಿ ಬಹಿರಂಗ ಪಡಿಸಿದೆ. * ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಮೊದಲು 2018 ರಲ್ಲಿ ಫೈಜಾಬಾದ್ ನ್ನು ಅಯೋಧ್ಯೆ ಎಂದು ಮರುನಾಮಕರಣ ಮಾಡಿದ್ದರು, ಹಾಗೂ ಅಲ್ಲಾಹಾಬಾದ್ ನ್ನು ಪ್ರಯಾಗ್ ರಾಜ್ ಎಂದು ಇದರ ಜೊತೆಗೆ ಮುಘಲ್ ಸರೈ ರೈಲ್ವೆ ನಿಲ್ದಾಣವನ್ನು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ ಎಂದು ಮರುನಾಮಕರಣ ಮಾಡಿದ್ದರು.