Job Description: * ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಕ್ಷೇತ್ರವಾದ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಗೆ ಚಾಲನೆ ನೀಡಿದರು. * ದೇಶದ ಜನರಿಗಾಗಿ ಪ್ರಾರಂಭಿಸಲಾದ ಈ ಯೋಜನೆಯಡಿ ಆರೋಗ್ಯ ಕ್ಷೇತ್ರಕ್ಕಾಗಿಯೇ 64 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ. * ಸಮಾಜದ ಹಿಂದುಳಿದ ವರ್ಗಗಳಿಗೆ ಪರಿಣಾಮಕಾರಿ ಚಿಕಿತ್ಸೆಯನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. * ಪಿಎಂಎಎಸ್ ಬಿವೈನ ಉದ್ದೇಶ ದೇಶಾದ್ಯಂತ ಆರೋಗ್ಯ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಭಾರತದ ಅತಿದೊಡ್ಡ ಯೋಜನೆ ಇದಾಗಿದೆ, ಎಲ್ಲಾ ಜಿಲ್ಲೆಗಳಲ್ಲಿ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುತ್ತದೆ ಎಂದು ತಿಳಿಸಲಾಗಿದೆ.