Job Description: * ಇತ್ತೀಚಿಗೆ ದೆಹಲಿಯಲ್ಲಿ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿತ್ತು. * ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಂದ ನಟ ರಜನಿಕಾಂತ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. * ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ 'ಸೂಪರ್ ಸ್ಟಾರ್ ರಜನಿಕಾಂತ್' ಅವರು ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ'ಯನ್ನು ಸ್ವೀಕರಿಸಲು ನನಗೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದರು.