Job Description: * ಪ್ರಧಾನಿ ಮೋದಿ ಅವರು 'ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ ಆರೋಗ್ಯ ಮೂಲ ಸೌಕರ್ಯ ಮಿಷನ್'ಗೆ ಚಾಲನೆ ನೀಡಿದ್ದಾರೆ, ಪ್ರಸ್ತುತ ಇದು ದೇಶದಲ್ಲಿ ಬೃಹತ್ ಪ್ರಮಾಣದ ಆರೋಗ್ಯ ಮೂಲಸೌಲಭ್ಯ ಒದಗಿಸುವ ಅತೀ ದೊಡ್ಡ ಯೋಜನೆಯಾಗಿದೆ ಎಂದು ತಿಳಿಸಿದರು. * ಪ್ರಸ್ತುತ ಚಾಲನೆಯಲ್ಲಿರುವ ರಾಷ್ಟ್ರೀಯ ಆರೋಗ್ಯ ಮಿಷನ್'ಗೆ ಇದು ಹೆಚ್ಚುವರಿಯಾಗಿ ಅನುಷ್ಠಾನಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. * ಪ್ರಸ್ತುತ ನಗರ ಹಾಗೂ ಗ್ರಾಮೀಣ ಭಾಗದಲ್ಲಿನ ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ವಿಭಾಗದಲ್ಲಿ ಪ್ರಮುಖ ಆರೈಕೆ, ಹಾಗೂ ಪ್ರಾಥಮಿಕ ಆರೈಕೆಯ ಸೌಲಭ್ಯಗಳ ಮಧ್ಯೆ ಇರುವ ವ್ಯತ್ಯಾಸವನ್ನು ಕಡೆಮಾಡಲು ಈ ಯೋಜನೆಯು ಸಹಾಯ ಮಾಡಲಿದೆ ಎಂದಿದ್ದಾರೆ. * ಈ ಯೋಜನೆಯು 10 ಪ್ರಮುಖ ರಾಜ್ಯಗಳಲ್ಲಿನ 17,788 ಗ್ರಾಮೀಣ ಆರೋಗ್ಯ ಮತ್ತು ಕಲ್ಯಾಣ ಕೇಂದ್ರಗಳಿಗೆ ಸಹಾಯ ನೀಡಲಿದೆ, ಹಾಗೂ ಉಳಿದಿರುವ ಎಲ್ಲ ರಾಜ್ಯಗಳಲ್ಲಿನ 11,024 ನಗರಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೇಂದ್ರಗಳನ್ನು ಪ್ರಾರಂಭಿಸಲು ಸಹಾಯ ಮಾಡಲಿದೆ. * ಪ್ರಸ್ತುತ 5 ಲಕ್ಷ ಜನಸಂಖ್ಯೆಗಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ದೇಶದ ಎಲ್ಲಾ ಜಿಲ್ಲೆಗಳಲ್ಲಿನ ಜಿಲ್ಲಾ ಆಸ್ಪತ್ರೆಗಳಲ್ಲಿ ಈ ಯೋಜನೆಯು ಪ್ರತ್ಯೇಕ ವಿಭಾಗಗಳ ಮೂಲಕ ಪ್ರಮುಖ ಆರೈಕೆ ಸೌಲಭ್ಯಗಳು ಲಭ್ಯವಾಗಲಿವೆ ಎಂದು ತಿಳಿಸಿದ್ದಾರೆ, ಅಷ್ಟೇ ಅಲ್ಲದೇ ಪ್ರತಿ ಜಿಲ್ಲೆಯಲ್ಲಿಯೂ ಕೂಡ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪನೆ ಮಾಡಲಾಗುತ್ತದೆ.