Job Description: * ಪ್ರಸ್ತುತ 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್ ಸೈಕಲ್ನಲ್ಲಿ ಕರೆದೊಯ್ಯಲು ಹೊಸ ಸುರಕ್ಷತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ. * ಈ ಹೊಸ ಸುರಕ್ಷತಾ ಮಾರ್ಗಸೂಚಿಯು ಮೋಟಾರ್ ಸೈಕಲ್ನ ಹಿಂದಿನ ಸೀಟಿನಲ್ಲಿ ಕುಳಿತು ಪ್ರಯಾಣಿಸುವ 9 ತಿಂಗಳಿಂದ 4 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಕ್ರ್ಯಾಶ್ ಹೆಲ್ಮೆಟ್ ಧರಿಸಿರಬೇಕು ಎಂದು ತಿಳಿಸಿದೆ, ಅಷ್ಟೇ ಅಲ್ಲದೇ ಆ ಸಂಧರ್ಭದಲ್ಲಿ ಮೋಟಾರ್ ಸೈಕಲ್ನ ವೇಗವು ಗಂಟೆಗೆ 40 ಕಿ.ಮೀ.ಗಿಂತ ಜಾಸ್ತಿ ಇರಬಾರದು ಎಂದು ತಿಳಿಸಿದೆ.