Job Description: * ಪ್ರಸ್ತುತ ಶಿಕ್ಷಕರ ನೇಮಕಾತಿಗಾಗಿ ನಡೆಯುವ ಸಿಇಟಿ ಪರೀಕ್ಷೆಯಲ್ಲಿ ಅಗತ್ಯವಿರುವಷ್ಟು ಸಂಖ್ಯೆಯ ಶಿಕ್ಷಕರು ಪಾಸಾಗುತ್ತಿಲ್ಲ. ಈ ಕಾರಣದಿಂದಾಗಿ ವರ್ಷಕ್ಕೆ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಾಹಿತಿ ನೀಡಿದ್ದಾರೆ. * ಈ ಹಿಂದೆ ಸಿಇಟಿ ಪರೀಕ್ಷೆ ನಡೆಸಿದಾಗ ಕೇವಲ 3 ಸಾವಿರ ಶಿಕ್ಷಕರು ಮಾತ್ರ ಈ ಪರೀಕ್ಷೆಯಲ್ಲಿ ಉತೀರ್ಣರಾಗಿದ್ದರು, ಆದರೆ ಆ ಸಮಯದಲ್ಲಿ ಅದಕ್ಕಿಂತಲೂ ಹೆಚ್ಚಿನ ಸಂಖ್ಯೆಯ ಶಿಕ್ಷಕರ ಅಗತ್ಯವಿತ್ತು ಎಂದು ತಿಳಿಸಿದ್ದರು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಈ ವಿಷಯವನ್ನು ಪರಿಗಣಿಸಿ ಇನ್ನು ಮುಂದೆ ವರ್ಷದಲ್ಲಿ ಎರಡು ಬಾರಿ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. * ಇದೀಗ ರಾಜ್ಯದಲ್ಲಿ ಸುಮಾರು 5 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ, ಈ ಎಲ್ಲ ಹುದ್ದೆಗಳಿಗೆ ಬೇಕಾಗಿರುವ ಶಿಕ್ಷಕರು ಉತ್ತಿರ್ಣರಾಗುವರೆಗೂ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. * ಅಷ್ಟೇ ಅಲ್ಲದೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(NEP) ಬರುವ ವರ್ಷದಿಂದಲೇ ಜಾರಿಗೊಳಿಸಲು ಚಿಂತನೆಯನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.