Job Description: * ಪ್ರಸ್ತುತ ಕರ್ನಾಟಕ ರಾಜ್ಯದ ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿ ದೇಶದಲ್ಲಿನ 13 ವಿಮಾನ ನಿಲ್ದಾಣಗಳನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆ ಮುಂದಿನ ಮಾರ್ಚ್ ತಿಂಗಳಿನ ಸಮಯಕ್ಕೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರವು ತೀರ್ಮಾನಿಸಿದೆ. * ಪ್ರಸ್ತುತ ವಿಮಾನಯಾನ ಸಚಿವಾಲಯಕ್ಕೆ ಖಾಸಗಿ ಮತ್ತು ಸಾರ್ವಜನಿಕ ವಲಯದ ಸಹಭಾಗಿತ್ವದ ಆಧಾರದಲ್ಲಿ ನಿರ್ವಹಣೆ ಮಾಡಲು ಒಟ್ಟಾರೆ 13 ವಿಮಾನ ನಿಲ್ದಾಣಗಳ ಮಾಹಿತಿಯನ್ನು ನೀಡಲಾಗಿದೆ, ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI)ದ ಅಧ್ಯಕ್ಷ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. * ಇದೀಗ ಕೇಂದ್ರ ಸರ್ಕಾರವು ವಿಮಾನ ನಿಲ್ದಾಣಗಳ ಆದಾಯವನ್ನು ಪರಿಗಣಿಸಿ ಹರಾಜು ಪ್ರಕ್ರಿಯೆ ಮಾಡಲಿದೆ, ಖಾಸಗಿ ವಲಯದವರಿಗೆ ಸುಮಾರು 50 ವರ್ಷಗಳ ಅವಧಿಗೆ ಈ ವಿಮಾನ ನಿಲ್ದಾಣಗಳ ನಿರ್ವಹಣೆಯ ಹೊಣೆಯನ್ನು ವಹಿಸಲಾಗುತ್ತದೆ ಎಂದು ತಿಳಿದು ಬಂದಿದೆ.