Job Description: * ಅಕ್ರಮ ಕಟ್ಟಡ ತೆರವಿಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠ, ನಗರದಲ್ಲಿನ ಅಕ್ರಮ ಕಟ್ಟಡ ತೆರವುಗೊಳಿಸಲು ಹೈಕೋರ್ಟ್ ಹೊರಡಿಸಿರುವ ಆದೇಶವನ್ನ ಯಾಕೆ ಪಾಲಿಸುತ್ತಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತರನ್ನ ನ್ಯಾಯಪೀಠ ಪ್ರಶ್ನಿಸುವದರ ಜೊತೆಗೆ ಚಾಟಿ ಬೀಸಿದೆ. * ನ್ಯಾಯಾಧೀಶರ ಪ್ರಶ್ನೆಗೆ ಉತ್ತರಿಸಿದ ಪಾಲಿಕೆ ಪರ ವಕೀಲರು, ನಗರದಲ್ಲಿ ಅಕ್ರಮ ಕಟ್ಟಡದ ನಿರ್ಮಾಣದಲ್ಲಿ ಎರಡು ರೀತಿಯಲ್ಲಿ ನಿರ್ಮಿಸಲಾಗಿದ್ದು, ಒಂದು ಪಾಲಿಕೆಯಿಂದ ನಕ್ಷೆ ಪಡೆದು ನಿಯಮ ಉಲ್ಲಂಘಿಸಿ ನಿರ್ಮಾಣ ಮಾಡಿದ ಕಟ್ಟಡಗಳಾದರೆ, ಇನ್ನೊಂದು ಪಾಲಿಕೆಯಿಂದ ನಕ್ಷೆ ಅನುಮೋದನೆ ಪಡೆಯದೇ ಕಟ್ಟಡ ನಿರ್ಮಿಸಿದ ಕಟ್ಟಡಗಳಾಗಿವೆ. ಅದರಂತೆ, 2020 ರ ನಂತರ ನಿರ್ಮಾಣವಾದ 5,905 ಕಟ್ಟಡಗಳನ್ನು ಸಮೀಕ್ಷೆ ಮಾಡಲಾಗಿದೆ. ಈ ಪೈಕಿ 4,279 ಕಟ್ಟಡಗಳು ನಕ್ಷೆ ಉಲ್ಲಂಘಿಸಿ ನಿರ್ಮಾಣ ಮಾಡಲಾಗಿದ್ದು, ಅವುಗಳಿಗೆ ನೋಟಿಸ್ ನೀಡುವ ಪ್ರಕ್ರಿಯೆ ನಡೆಯುತ್ತಿದೆ, ಇನ್ನೂ 2,591 ಕಟ್ಟಡಗಳನ್ನು ಸರ್ವೇ ಮಾಡಬೇಕಿದೆ ಎಂದು ಉತ್ತರಿಸಿದರು.