Job Description: * ಪ್ರಸ್ತುತ ತಮಿಳುನಾಡು ರಾಜ್ಯದಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ಮಾಡಲಾಗುವದಿಲ್ಲ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಹೇಳಿಕೆ ನೀಡಿದ್ದಾರೆ, ಅಷ್ಟೇ ಅಲ್ಲದೇ ತಮಿಳುನಾಡು ರಾಜ್ಯಕ್ಕಾಗಿಯೇ ಪ್ರತ್ಯೇಕ ಶಿಕ್ಷಣ ನೀತಿಯನ್ನು ರಚಿಸಲು ತಜ್ಞರ ಸಮಿತಿಯನ್ನು ನೇಮಕ ಮಾಡಲಾಗುತ್ತದೆ ಎಂದು ತಿಳಿಸಿದರು. * ಪ್ರಸ್ತುತ ತಮಿಳುನಾಡು ರಾಜ್ಯದಲ್ಲಿ ಅಲ್ಲಿನ ರಾಜ್ಯ ಸರ್ಕಾರವು ಇತ್ತೀಚಿಗಷ್ಟೇ ಮನೆಬಾಗಿಲಿಗೆ ಶಿಕ್ಷಣ ಒದಗಿಸುವ 'ಇಲ್ಲಂ ತೇಡಿ ಕಲ್ವಿ' ಯೋಜನೆಯು ಆರಂಭಿಸಿದೆ, ಇದು ರಾಜ್ಯದ ಶಿಕ್ಷಣ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಸಹಕಾರಿಯಾಗಲಿದೆ ಎಂದು ಎಂದು ಸ್ಟಾಲಿನ್ ಅವರು ತಿಳಿಸಿದ್ದಾರೆ.