Job Description: * ಪ್ರಸ್ತುತ ಕರ್ನಾಟಕ ರಾಜ್ಯವು ನವೆಂಬರ್. 01 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದೆ, ಕರ್ನಾಟಕ ಸೇರಿ ಇತರೆ '6' ರಾಜ್ಯಗಳು ಅಂದರೆ ಆಂಧ್ರ ಪ್ರದೇಶ, ಮಧ್ಯ ಪ್ರದೇಶ, ಚತ್ತೀಸ್ಗಡ್, ಕೇರಳ, ಹರ್ಯಾಣ ರಾಜ್ಯಗಳು ಇಂದು ಸಂಸ್ಥಾಪನಾ ದಿನವನ್ನು ಆಚರಿಸುತ್ತಿವೆ, ಈ ರಾಜ್ಯಗಳಿಗೆ ಗಳಿಗೆ ಪ್ರಧಾನ ಮಂತ್ರಿ ಮೋದಿ ಅವರು ಅಭಿನಂದನೆ ತಿಳಿಸಿದ್ದಾರೆ. * ಪ್ರಸ್ತುತ ಕರ್ನಾಟಕ, ಆಂಧ್ರ ಪ್ರದೇಶ, ಮಧ್ಯಪ್ರದೇಶ, ಕೇರಳ ರಾಜ್ಯಗಳು ತಮ್ಮ ಪ್ರಾದೇಶಿಕ ಭಾಷೆ ಆಧರಿಸಿ 1956 ರಲ್ಲಿ ಏಕೀಕರಣಗೊಂಡಿವೆ. * ಕನ್ನಡ ರಾಜ್ಯೋತ್ಸವವನ್ನು ಕರ್ನಾಟಕ ರಚನೆ ದಿನ ಅಥವಾ ಕರ್ನಾಟಕ ದಿನ ಎಂದೂ ಕರೆಯುತ್ತಾರೆ, ಈ ದಿನವನ್ನು ಪ್ರತಿ ವರ್ಷ ನವೆಂಬರ್ 1 ರಂದು ಕರ್ನಾಟಕದಲ್ಲಿ ಆಚರಿಸಲಾಗುತ್ತದೆ. * 1956 ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಕರ್ನಾಟಕ ರಾಜ್ಯವನ್ನು ರಚಿಸಲಾಗಿದೆ. * ಕರ್ನಾಟಕ ರಾಜ್ಯದಲ್ಲಿ ರಾಜ್ಯೋತ್ಸವ ದಿನವನ್ನು ಸರ್ಕಾರಿ ರಜೆ ಎಂದು ಘೋಷಣೆ ಮಾಡಲಾಗಿದೆ. * ಆಲೂರು ವೆಂಕಟರಾವ್ ಅವರು 1905 ರಲ್ಲಿಯೇ ಕರ್ನಾಟಕ ಏಕೀಕರಣ ಚಳುವಳಿಯನ್ನು ಆರಂಭಿಸುವ ಮೂಲಕ ರಾಜ್ಯವನ್ನು ಏಕೀಕರಿಸುವ ಕನಸನ್ನು ಕಂಡಿದ್ದರು. * ಭಾರತವು 1950 ರಲ್ಲಿ ಗಣರಾಜ್ಯವಾಯಿತು, ಮಾತನಾಡುವ ಭಾಷೆಯ ಆಧಾರದ ಮೇಲೆ ದೇಶದಲ್ಲಿ ವಿವಿಧ ಪ್ರಾಂತ್ಯಗಳನ್ನು ರಚಿಸಲಾಯಿತು, ದಕ್ಷಿಣ ಭಾರತದ ವಿವಿಧ ಸ್ಥಳಗಳನ್ನು ಸೇರಿಸಿ ಮೈಸೂರು ರಾಜ್ಯಕ್ಕೆ ಸ್ಥಾನ-ಮಾನ ನೀಡಲಾಯಿತು, ಈ ರಾಜ್ಯವನ್ನು ಮೊದಲು ರಾಜರು ಆಳಿದರು. * ಮೈಸೂರು ರಾಜ್ಯಕ್ಕೆ 1973 ರ ನವೆಂಬರ್. 01 ರಂದು 'ಕರ್ನಾಟಕ' ಎಂದು ಹೆಸರನ್ನು ಬದಲಾಯಿಸಲಾಯಿತು, ಆಗಿನ ರಾಜ್ಯದ ಮುಖ್ಯಮಂತ್ರಿಗಳಾದ ದೇವರಾಜ್ ಅರಸು ಅವರು ಈ ನಿರ್ಧಾರವನ್ನು ತೆಗೆದುಕೊಂಡರು.