Job Description: * ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನೀಡಲಾಗುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ವರ್ಷವೂ ಕೂಡ 66 ಸಾಧಕರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. * ಈಗಾಗಲೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು, ರಾಜ್ಯ ಸರ್ಕಾರ ಪ್ರಕಟಿಸಿದ್ದು, ಜಾನಪದ ಕಲಾವಿದ ಶಹನಾಯಿ ವೆಂಕಪ್ಪಗೆ, 'ತರಂಗ' ವಾರಪತ್ರಿಕೆಯ ಸಂಪಾದಕಿ ಡಾ| ಯು. ಬಿ. ರಾಜಲಕ್ಷ್ಮೀ ಅವರಿಗೆ, ಬಸವನಾಡಿನ ನಡೆದಾಡುವ ವಿಶ್ವವಿದ್ಯಾಲಯ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿಗೆ, ಲಕ್ಷ ಚಿಕಿತ್ಸೆ ಮಾಡಿದ ಡಾ.ರಾಮನಗೌಡರಗೆ, 40 ಲಕ್ಷ ಜನರಿಗೆ ಚಿಕಿತ್ಸೆ ನೀಡಿದ ಡಾ. ಅಂಬಣ್ಣಗೆ, ಗಂಗಾವತಿಯ ಪ್ರಾಣೇಶ್ ಸೇರಿದಂತೆ ವಿವಿಧ ವಲಯದಲ್ಲಿನ 66 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. * ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಾಧ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿದ್ದು ಈ ಸಮಯದಲ್ಲಿ 10 ಸಂಸ್ಥೆಗಳಿಗೆ 2021 ರ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ.