Job Description: * ಪ್ರಸ್ತುತ ಒಡಿಶಾ ಸರ್ಕಾರವು ರಾಜ್ಯದಲ್ಲಿ ಮೋಟಾರು ವಾಹನಗಳ ತೆರಿಗೆ ಮತ್ತು ಎಲೆಕ್ಟ್ರಿಕ್ ವಾಹನಗಳ (EV) ನೋಂದಣಿ ಶುಲ್ಕಗಳಿಗೆ ಸಂಪೂರ್ಣ ವಿನಾಯಿತಿಯನ್ನು ಘೋಷಣೆ ಮಾಡಿದೆ. * ಎಲೆಕ್ಟ್ರಿಕ್ ವಾಹನಗಳ ವೇಗದ ಅಳವಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಒಡಿಶಾ ಸರ್ಕಾರವು ಈ ನಿರ್ಧಾರವನ್ನು ಕೈಗೊಂಡಿದೆ, ಪ್ರಸ್ತುತ ಮೋಟಾರು ವಾಹನಗಳ ತೆರಿಗೆ ಕಾಯಿದೆ ಅಡಿಯಲ್ಲಿ ವಿನಾಯಿತಿ ನೀಡಲಾಗಿದೆ, ಹಾಗೂ ಇದು 2025 ರವರೆಗೆ ಈ ವಿನಾಯಿತಿ ಅನ್ವಯವಾಗಲಿದೆ ಎಂದು ಸರ್ಕಾರ ತಿಳಿಸಿದೆ. * ಇದೀಗ ಒಡಿಶಾ ಸರ್ಕಾರವು ಮೋಟಾರು ವಾಹನಗಳ ತೆರಿಗೆ ಮತ್ತು ಬ್ಯಾಟರಿ ಚಾಲಿತ ವಾಹನಗಳ ನೋಂದಣಿ ಶುಲ್ಕದ ಮೇಲೆ ಶೇ. 100 ಪ್ರತಿಶತ ವಿನಾಯಿತಿಯನ್ನು ಘೋಷಣೆ ಮಾಡಿದೆ, ಅಷ್ಟೇ ಅಲ್ಲದೇ ರಾಜ್ಯ ಸರ್ಕಾರಿ ನೌಕರರಿಗೆ ಎಲೆಕ್ಟ್ರಿಕ್ ವಾಹನಗಳ ಮೇಲೆ ಬಡ್ಡಿ ರಹಿತ ಸಾಲ ಸೌಲಭ್ಯ ನೀಡಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ. * ಪ್ರಸ್ತುತ ದೆಹಲಿ, ಕೇರಳ, ಗುಜರಾತ್, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳು FAME II ಯೋಜನೆಯ ಬಿಟ್ಟು 'ಇ-ವಾಹನ ನೀತಿ'ಯನ್ನು ಜಾರಿಗೆ ತಂದಿವೆ.