Job Description: * ಕೇಂದ್ರ ಸರ್ಕಾರವು ಇದೇ ನವೆಂಬರ್ 8 ರಿಂದ ಎಲ್ಲಾ ಹಂತದ ಉದ್ಯೋಗಿಗಳಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಲು ತೀರ್ಮಾನಿಸಿದೆ ಎಂದು ಸಿಬ್ಬಂದಿ ಸಚಿವಾಲಯ ಮಾಹಿತಿ ನೀಡಿದೆ. * ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಉದ್ಯೋಗಿಗಳಿಗೆ ಇಲ್ಲಿಯವರೆಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿತ್ತು, ಆದರೆ ಕೇಂದ್ರ ಸರ್ಕಾರವು ಮತ್ತೇ ಎಲ್ಲಾ ಉದ್ಯೋಗಿಗಳಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯ ಗೊಳಿಸುವದಾಗಿ ತಿಳಿಸಿದೆ. * ಎಲ್ಲಾ ಉದ್ಯೋಗಿಗಳು ಬಯೋಮೆಟ್ರಿಕ್ ಹಾಜರಾತಿಯನ್ನು ನೀಡುವ ವೇಳೆ ಸಾಮಾಜಿಕ ಅಂತರ ಹಾಗೂ ಮಾಸ್ಕ ಧರಿಸಿರ ಬೇಕು ಎಂದು ಸಿಬ್ಬಂದಿ ಸಚಿವಾಲಯ ತಿಳಿಸಿದೆ.