Job Description: * ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಗುರುತಿನ ಚೀಟಿಗಳನ್ನು ವಿತರಣೆ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಮುಂದಾಗಿದೆ. * ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಇದೀಗ ರಾಜ್ಯದಲ್ಲಿನ ಪ್ರತಿಯೊಬ್ಬ ಶಿಕ್ಷಕರಿಗೆ ಗುರುತಿನ ಚೀಟಿಗಾಗಿ ತಲಾ ಒಬ್ಬೊಬ್ಬ ಶಿಕ್ಷಕರಿಗೆ 50 ರೂ.ಗಳಂತೆ ಒಟ್ಟು 99.09 ಲಕ್ಷ ರೂ. ಹಣವನ್ನು ಬಿಡುಗಡೆಗೊಳಿಸಿದ್ದಾರೆ. * ಯಾವುದೇ ಸರ್ಕಾರಿ ಕಚೇರಿಗೆ ಸಾರ್ವಜನಿಕರು ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಅಗತ್ಯವಿರುವ ನೌಕರರನ್ನು ಸುಲಭವಾಗಿ ಗುರುತಿಸಿ ಭೇಟಿಯಾಗಲು ಎಲ್ಲಾ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುರುತಿನ ಚೀಟಿಗಳನ್ನು ವಿತರಣೆ ಮಾಡಲು ಮುಂದಾಗಿದೆ.