Job Description: * ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ 2021 ನೇ ಸಾಲಿನ ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. * ಈ ಸಮಯದಲ್ಲಿ 7 ಪದ್ಮವಿಭೂಷಣ, 10 ಪದ್ಮಭೂಷಣ, 102 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಯಿತು. ಪ್ರಶಸ್ತಿ ಪಡೆದವರಲ್ಲಿ 29 ಮಹಿಳೆಯರು, ಓರ್ವ ತೃತೀಯ ಲಿಂಗಿ ಸೇರಿದಂತೆ 119 ಜನರಿಗೆ 'ಪದ್ಮ' ಪ್ರಶಸ್ತಿ ಪ್ರಧಾನ ಮಾಡಲಾಯಿತು. ಪದ್ಮವಿಭೂಷಣ ಪ್ರಶಸ್ತಿ ಪಡೆದವರು : ಜಪಾನ್ನ ಮಾಜಿ ಪ್ರಧಾನಿ ಶಿಂಬೊ ಅಬೆ, ಕರ್ನಾಟಕದ ಪೇಜಾವರ ಶ್ರೀ, ಡಾ. ಬಿ. ಎಂ. ಹೆಗ್ಡೆ, ಗಾಯಕ ಎಸ್. ಪಿ. ಬಾಲಸುಬ್ರಮಣ್ಯಂ (ಮರಣೋತ್ತರ), ನರಿಂದರ್ ಸಿಂಗ್ ಕಪಾನಿ (ಮರಣೋತ್ತರ), ಮೌಲಾನಾ ವಹೀದುದ್ದೀನ್ ಖಾನ್, ಬಿ. ಬಿ. ಲಾಲ್ ಮತ್ತು ಸುದರ್ಶನ್ ಸಾಹೋ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದ್ಮಭೂಷಣ ಪ್ರಶಸ್ತಿ ಪಡೆದವರು : ಕೃಷ್ಣನ್ ನಾಯರ್ ಶಾಂತಾ ಕುಮಾರಿ ಚಿತ್ರಾ, ತರುಣ್ ಗೊಗಯ್ (ಮರಣೋತ್ತರ), ಚಂದ್ರ ಶೇಖರ ಕಂಬಾರ, ಸುಮಿತ್ರಾ ಮಹಾಜನ್, ನೃಪೇಂದ್ರ ಮಿಶ್ರಾ, ರಾಮ್ ವಿಲಾಸ್ ಪಾಸ್ವಾನ್ (ಮರಣೋತ್ತರ), ಕೇಶುಭಾಯ್ ಪಟೇಲ್ (ಮರಣೋತ್ತರ), ಕಲ್ಬೆ ಸಾದಿಕ್ (ಮರಣೋತ್ತರ), ರಜನಿಕಾಂತ್ ದೇವಿದಾಸ್ ಶ್ರಾಫ್ ಮತ್ತು ತರ್ಲೋಚನ್ ಸಿಂಗ್ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪಡೆದವರು : ಕೃಷ್ಣನ್ ನಾಯರ್ ಶಾಂತಾ ಕುಮಾರಿ ಚಿತ್ರಾ, ತರುಣ್ ಗೊಗಯ್ (ಮರಣೋತ್ತರ), ಚಂದ್ರ ಶೇಖರ ಕಂಬಾರ, ಸುಮಿತ್ರಾ ಮಹಾಜನ್, ನೃಪೇಂದ್ರ ಮಿಶ್ರಾ, ರಾಮ್ ವಿಲಾಸ್ ಪಾಸ್ವಾನ್ (ಮರಣೋತ್ತರ), ಕೇಶುಭಾಯ್ ಪಟೇಲ್ (ಮರಣೋತ್ತರ), ಕಲ್ಬೆ ಸಾದಿಕ್ (ಮರಣೋತ್ತರ), ರಜನಿಕಾಂತ್ ದೇವಿದಾಸ್ ಶ್ರಾಫ್, ತರ್ಲೋಚನ್ ಸಿಂಗ್ ಪದ್ಮಭೂಷಣ ಪ್ರಶಸ್ತಿ ಪಡೆದಿದ್ದಾರೆ. ಸಿನಿ ರಂಗದಲ್ಲಿ ಕಂಗನಾ ರಣಾವತ್, ಕರಣ್ ಜೋಹರ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪಡೆದ ಕನ್ನಡಿಗರು : ಒಟ್ಟು 102 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು ಅದರಲ್ಲಿ ಕರ್ನಾಟಕದ ಮಾತಾ ಬಿ. ಮಂಜಮ್ಮ ಜೋಗತಿ (ಕಲೆ), ರಂಗಸ್ವಾಮಿ ಲಕ್ಷ್ಮಿನಾರಾಯಣ ಕಶ್ಯಪ್ (ಸಾಹಿತ್ಯ ಮತ್ತು ಶಿಕ್ಷಣ) ಮತ್ತು ಕೆ. ವೈ. ವೆಂಕಟೇಶ್ (ಕ್ರೀಡೆ) ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪಡೆದ ಹಾಜಬ್ಬ: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಹರೇಕಳ ಹಾಜಬ್ಬಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನ ಮಾಡಿದರು.