Job Description: * ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ ಪ್ರಸ್ತಾವನೆಗೆ, ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. * ಸಚಿವ ಸಂಪುಟ ಸಭೆಯ ನಂತ್ರ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವ ಜೆ.ಸಿ. ಮಾಧುಸ್ವಾಮಿಯವರು ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂದು ನಾಮಕರಣ ಮಾಡುವ ಪ್ರಸ್ತಾವನೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಲ್ಲಿಸಿತ್ತು. * ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕಡತಕ್ಕೆ ಅನುಮೋದನೆ ನೀಡಲಾಗಿದೆ ಎಂದ ಅವರು ಇನ್ನುಮುಂದೆ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂಬುದಾಗಿ ಕರೆಯಲ್ಪಡುತ್ತವೆ ಎಂದು ತಿಳಿಸಿದರು.