Job Description: * ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮೀಣ ಜನತೆಗಾಗಿ ವಿದ್ಯುನ್ಮಾನ ನಾಗರಿಕ ಸೇವಾ ವಿತರಣೆ ನಿರ್ದೇಶನಾಲಯದಿಂದ 'ಗ್ರಾಮ ಒನ್' ಯೋಜನೆಯನ್ನು ಅನುಷ್ಠಾನಗೊಳಿಸಲು ಸಿದ್ಧತೆ ನಡೆಸಿದೆ, ಇದೀಗ ರಾಜ್ಯದ 12 ಜಿಲ್ಲೆಗಳಲ್ಲಿ'ಗ್ರಾಮ ಒನ್' ಯೋಜನೆಯನ್ನು ಅನುಷ್ಠಾನಗೊಳ್ಳಲಿದೆ ಎಂದು ತಿಳಿಸಿದ್ದಾರೆ. * ಇದೀಗ ರಾಜ್ಯವು ಕರ್ನಾಟಕ ಒನ್ ಮಾದರಿಯಲ್ಲಿ ನಗರ ಪ್ರದೇಶಗಳಲ್ಲಿ ಒದಗಿಸುತ್ತಿರುವ ಸೇವೆಯನ್ನು ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರವು ಸಿದ್ದತೆಯನ್ನು ನಡೆಸಿದೆ ಎನ್ನಲಾಗಿದೆ. * ಕರ್ನಾಟಕದ `ಗ್ರಾಮ ಒನ್' ಯೋಜನೆ ಅನುಷ್ಠಾನಕ್ಕೆ ಸಿದ್ದವಾಗಿರುವ ಜಿಲ್ಲೆಗಳು: ಬಳ್ಳಾರಿ, ಕೊಪ್ಪಳ, ವಿಜಯಪುರ, ಬೆಳಗಾವಿ, ಬೀದರ್, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ ಜಿಲ್ಲೆಗಳಲ್ಲಿ ಫ್ರಾಂಚೈಸಿ ಅಡಿಯಲ್ಲಿ ಈ `ಗ್ರಾಮ ಒನ್' ಸೇವಾ ಕೇಂದ್ರ ಪ್ರಾರಂಭಿಸಲು ಸರ್ಕಾರವು ನಿರ್ಧಾರವನ್ನು ಕೈಗೊಂಡಿದೆ. * ರಾಜ್ಯದ ಈ `ಗ್ರಾಮ ಒನ್' ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಯೋಜನೆಯ 750 ಕ್ಕೂ ಅಧಿಕ ನಾಗರಿಕ ಸೇವೆಗಳನ್ನು ಪಡೆಯಲು ಅರ್ಜಿ ಸ್ವೀಕಾರಮಾಡಲಾಗುತ್ತದೆ, ಪ್ರಸ್ತುತ ಈ ಕೇಂದ್ರಗಳು ಬೆಳಗ್ಗೆ 8 :00 ರಿಂದ ರಾತ್ರಿ 8:00 ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತವೆ ಎಂದು ತಿಳಿಸಿದ್ದಾರೆ.