Job Description: * ಭಾರತ ತಂಡದ ಮಾಜಿ ಆಲ್ ರೌಂಡರ್ ಸಂಜಯ್ ಬಂಗಾರ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ (IPL) 15 ನೇ ಆವೃತ್ತಿಯ ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ, RCB ಮಾಹಿತಿ ನೀಡಿದೆ. * ಈ ಮೊದಲು ಮೈಕ್ ಹೇಸನ್ ಅವರು RCB ತಂಡಕ್ಕೆ ಮುಖ್ಯ ಕೋಚ್ ಆಗಿ 2021 ರ ಟೂರ್ನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು, ಇದೀಗ ಇವರು ಆರ್ಸಿಬಿ(RCB)ಯ ಕ್ರಿಕೆಟ್ ಡೈರೆಕ್ಟರ್ ಆಗಿ ಮುಂದುವರೆಯಲಿದ್ದಾರೆ ಎಂದು RCB ತಿಳಿಸಿದೆ.