Job Description: * ಪ್ರಸ್ತುತ ಭಾರತದ ನೇತೃತ್ವದ ಭದ್ರತಾ ಸಂವಾದಲ್ಲಿ ಅಫ್ಘಾನಿಸ್ತಾನ ರಾಷ್ಟ್ರದ ನೆಲವನ್ನು ಜಾಗತಿಕವಾಗಿ ಭಯೋತ್ಪಾದನೆಗೆ ಬಳಕೆ ಮಾಡಿಕೊಳ್ಳಲು ಅವಕಾಶ ನೀಡದಂತೆ ನಿರ್ಧರಿಸಲಾಗಿದೆ. * ಈ ನಿರ್ಧಾರಕ್ಕೆ ಭಾರತ, ರಷ್ಯಾ, ಇರಾನ್, ಮತ್ತು ಮಧ್ಯಪ್ರಾಚ್ಯದ ಐದು ರಾಷ್ಟ್ರಗಳು ದೆಹಲಿಯಲ್ಲಿ ನಡೆದ ಸಂವಾದವನ್ನು ನಡೆಸಿ ಈ ನಿರ್ಧಾರವನ್ನು ಕೈಗೊಂಡಿವೆ. * ಈಗಿನ ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿಯ ಬಗ್ಗೆ ಭಾರತವು ಆಯೋಜಿಸಿರುವ ಈ ಸಂವಾದದಲ್ಲಿ ಮುಕ್ತ ಹಾಗೂ ನೈಜವಾಗಿ ಎಲ್ಲರನ್ನೂ ಒಳಗೊಳ್ಳುವ ಸರ್ಕಾರ ಅಲ್ಲಿ ರಚನೆಯಾಗಬೇಕಾಗಿದೆ ಎಂದು ತಿಳಿಸಿದ್ದಾರೆ, ಅಷ್ಟೇ ಅಲ್ಲದೇ ಆಫ್ಘಾನಿಸ್ತಾನದ ನೆಲವು ಕೇಂದ್ರ ಹಾಗೂ ಉಗ್ರ ಚಟುವಟಿಕೆಗಳ ಯೋಜನೆ, ಆರ್ಥಿಕ ಚಟುವಟಿಕೆಗಳಿಗೆ ಬಳಕೆಯಾಗದಂತೆ ಎಚ್ಚರದಿಂದ ಕಾರ್ಯ ನಿರ್ವಹಿಸಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. * ಭಾರತದ ನೇತೃತ್ವದ ಭದ್ರತಾ ಸಂವಾದಲ್ಲಿ ಮಧ್ಯಪ್ರಾಚ್ಯದ ರಾಷ್ಟ್ರಗಳಾಗಿರುವ ಕಝಾಕಿಸ್ತಾನ್, ಕಿರ್ಗಿಸ್ತಾನ್, ತಜಿಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ರಾಷ್ಟ್ರಗಳು ಪಾಲ್ಗೊಂಡಿದ್ದವು.