Job Description: ಪ್ರತಿ ವರ್ಷ ನವೆಂಬರ್ 11ರಂದು ಕರ್ನಾಟಕ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಓಬವ್ವ ಜಯಂತಿ ಆಚರಣೆ ಮಾಡಲಾಗತ್ತಿದೆ. ಇದೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಒನಕೆ ಓಬವ್ವ ಜಯಂತಿಯ ಹಿನ್ನಲೆ ವೀರ ವನಿತೆಗೆ ಸಾಮಾಜಿಕ ಮಾಧ್ಯಮವಾದ ಟ್ವಿಟ್ಟರ್ ಮೂಲಕ ನಮನವನ್ನು ಸಲ್ಲಿಸಿದ್ದಾರೆ. "ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ" ಎಂದು ತಿಳಿಸಿದ್ದಾರೆ.