Job Description: * ರಾಜ್ಯ ಸರ್ಕಾರ ರಾಜ್ಯದ ರೈತ ಸಮುದಾಯಕ್ಕೆ ಶುಭಸುದ್ದಿಯೊಂದನ್ನು ನೀಡಿದ್ದು, ಎಸ್ . ಎಂ . ಕೃಷ್ಣ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ "ಯಶಸ್ವಿನಿ ಯೋಜನೆ"ಯನ್ನು ಮರು ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. * ಈ "ಯಶಸ್ವಿ ಯೋಜನೆ" ಗ್ರಾಮೀಣ ಸಹಕಾರಿಗಳ ಆರೋಗ್ಯ ಸುರಕ್ಷತಾ ಯೋಜನೆಯಾಗಿದ್ದು, ಯಾವುದೇ ಸಂಘದ ಸದಸ್ಯರು ಕನಿಷ್ಟ ಮೊತ್ತದ ಪ್ರೀಮಿಯಂ ಮೊತ್ತವನ್ನು ಪಾವತಿಸಿ ತಮ್ಮ ಕುಟುಂಬದವರ ಹೆಸರನ್ನು ನೋಂದಣಿ ಮಾಡಿಸಿಕೊಂಡರೆ ವಿವಿಧ ಶಸ್ತ್ರ ಚಿಕಿತ್ಸೆಗಳನ್ನು ಉಚಿತವಾಗಿ ಮಾಡಿಸಿಕೊಳ್ಳಬಹುದಾಗಿದೆ.