Job Description: * ಭಾರತ ಮತ್ತು ಪಾಕಿಸ್ತಾನದ ನಡುವೆ 2019 ಫೆಬ್ರವರಿ 26 ರಂದು ನಡೆದಂಥ ಬಾಲಾಕೋಟ್ ವಾಯುದಾಳಿಯಲ್ಲಿ ಅಭಿನಂದನ್ ಅವರು ಪಾಕಿಸ್ತಾನದ F-16 ಯುದ್ಧ ವಿಮಾನವನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಆ ಸಮಯದಲ್ಲಿ ಅವರು ಪಾಕಿಸ್ತಾನ ನೆಲದ ಮೇಲೆ ಬಿದ್ದಿದ್ದರಿಂದ ಅಲ್ಲಿನ ಸೈನಿಕರು ಇವರನ್ನು ಹಿಡಿದು ಚಿತ್ರಹಿಂಸೆಯನ್ನೂ ಕೊಟ್ಟಿದ್ದರು. ಆದರೆ ಪಾಕಿಸ್ತಾನದ ಮೇಲೆ ಭಾರತವು ಜಾಗತಿಕವಾಗಿ ಒತ್ತಡ ಹೇರಿದ್ದರಿಂದ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸಿದ್ದರಿಂದ ಭಾರತದ ಧೀರಪುತ್ರನೊಬ್ಬ ಸುರಕ್ಷಿತವಾಗಿ ತಾಯ್ನಾಡನ್ನು ಸೇರಿದ್ದರು. * ಭಾರತೀಯ ವಾಯುಪಡೆಯಲ್ಲಿರುವ 1960 ರ ದಶಕದ ಮಾಡೆಲ್ ಗಳಾದ ಮಿಗ್-21 ವಿಮಾನಗಳನ್ನೆ ಭಾರತ ಮೇಲ್ದರ್ಜೆಗೇರಿಸಿ ಇನ್ನೂ ಬಳಸುತ್ತಿದೆ. ಆದರೆ ಪಾಕಿಸ್ತಾನದ ಬತ್ತಳಿಕೆಯಲ್ಲಿರುವ ಅತ್ಯಾಧುನಿಕ ಸೌಲಭ್ಯ ಹೊಂದಿದ ಎಫ್-16 ವಿಮಾನವನ್ನೇ ಅಭಿನಂದನ್ ಅವರು ಹೊಡೆದುರುಳಿಸಿದ್ದು ಭಾರಿ ವಿಶ್ವದಾಖಲೆ ಎಂದು ನಿವೃತ್ತ ವಾಯುಪಡೆ ಅಧಿಕಾರಿಗಳು ಬಣ್ಣಿಸಿದ್ದಾರೆ. * ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಅಭಿನಂದನ್ ಅವರಿಗೆ ಪ್ರತಿಷ್ಠಿತ 'ವೀರ ಚಕ್ರ' ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ವಿಂಗ್ ಕಮಾಂಡರ್ ಆಗಿದ್ದ ಅಭಿನಂದನ್ ಅವರು ಇತ್ತೀಚೆಗೆ ಭಾರತೀಯ ವಾಯುಪಡೆಯ ಏಸ್ ಪೈಲಟ್ ಗ್ರೂಪ್ ಕ್ಯಾಪ್ಟನ್ ಹುದ್ದೆಗೆ ಬಡ್ತಿಯನ್ನು ಪಡೆದಿದ್ದರು.