Job Description: * ಸೋಮವಾರದಂದು ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿಯು 2025 ರ ಚಾಂಪಿಯನ್ ಟ್ರೋಪಿ ಪಾಕಿಸ್ತಾನದಲ್ಲಿಯೇ ಎಂದು ಖಚಿತಪಡಿಸಿದೆ. * ಭಾರತ ತಂಡ ಪಾಕಿಸ್ತಾನಕ್ಕೆ ತೆರಳುವದು ಅನುಮಾನ. ಟೂರ್ನಿಯನ್ನು UAE ಗೆ ಸ್ಥಳಾಂತರಿಸಲಾಗುತ್ತದೆ ಎಂದು ಮಾಧ್ಯಮಗಳು ವರದಿಯನ್ನು ಪ್ರಕಟಿಸಿದ ಹಿನ್ನೆಲೆಯಲ್ಲಿ ಐಸಿಸಿ ಮುಖ್ಯಸ್ಥ ಗ್ರೆಗ್ ಬಾರ್ಕ್ಲೇ ಭಾರತದ ಪ್ರಸಿದ್ಧ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದು "ಎಲ್ಲಾ ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನಕ್ಕೆ ತೆರಳಲಿವೆ, ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ನಡೆಯಲಿದೆ" ಎಂದಿದ್ದಾರೆ.