Job Description: * ಪ್ರಸ್ತುತ ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಜೆವಾರ್ದಲ್ಲಿನ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆಯನ್ನು ಮಾಡಲಿದ್ದಾರೆ. * ಇದೀಗ ಕೇಂದ್ರ ಸರ್ಕಾರವು 10,050 ಕೋಟಿಗೂ ಅಧಿಕ ವೆಚ್ಚದಲ್ಲಿ ವಿಮಾನ ನಿಲ್ದಾಣದ ಮೊದಲ ಹಂತದ ಕಾರ್ಯವನ್ನು ಅಭಿವೃದ್ಧಿಪಡಿಸುತ್ತಿದೆ. * ವಿಮಾನ ನಿಲ್ದಾಣದ ಮೊದಲ ಹಂತದ ಕಾರ್ಯ ಪೂರ್ಣಗೊಂಡ ನಂತರ ವರ್ಷಕ್ಕೆ ಸುಮಾರು 1.2 ಕೋಟಿ ಪ್ರಯಾಣಿಕರಿಗೆ ತನ್ನ ಸೇವೆಯನ್ನು ನೀಡಲಿದೆ, ಹಾಗೂ 2024 ರ ಸಮಯಕ್ಕೆ ವಿಮಾನ ನಿಲ್ದಾಣದ ಕೆಲಸಗಳನ್ನು ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. * ಪ್ರಸ್ತುತ ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಜೆವಾರ್ದಲ್ಲಿನ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು 10,050 ಕೋಟಿ ವೆಚ್ಚದಲ್ಲಿ ಮೊದಲ ಹಂತವನ್ನು ಅಭಿವೃದ್ಧಿಪಡಿಸಲಾಗುತ್ತಿದೆ, ಹಾಗೂ ಇದು ಒಟ್ಟು 1300 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದೆ. * ಇದು ದೆಹಲಿ NCR ನಲ್ಲಿ ಬರಲಿರುವ ವಿಮಾನ ನಿಲ್ದಾಣಗಳ ಪೈಕಿ 2 ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ ಎಂದು NIA ತಿಳಿಸಿದೆ.