Job Description: * ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರು 3 ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಣೆ ಮಾಡಿದ್ದಾರೆ, ಇದೀಗ ಕೇಂದ್ರ ಸಚಿವ ಸಂಪುಟವು ಈ 3 ಕೃಷಿ ಕಾಯ್ದೆಗಳ ರದ್ದತಿಗೆ ಅನುಮೋದನೆ ನೀಡಿದೆ, ಅಷ್ಟೇ ಅಲ್ಲದೇ ಕೃಷಿ ಕಾನೂನುಗಳ ರದ್ದತಿ ಮಸೂದೆಯ ಜೊತೆಗೆ 26 ಹೊಸ ಮಸೂದೆಗಳನ್ನು ಸಚಿವ ಸಂಪುಟವು ಒಪ್ಪಿಗೆಯನ್ನು ನೀಡಿದೆ. * ಇದೇ ನವೆಂಬರ್ 29 ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಈ ಹೊಸ 26 ಮಸೂದೆಗಳನ್ನೂ ಮಂಡನೆ ಮಾಡಲು ಸಕಲ ಸಿದ್ಧತೆಗಳನ್ನೂ ನಡೆಸಲಾಗುತ್ತಿದೆ ಎಂದಿದ್ದಾರೆ. * ಇದೇ ನವೆಂಬರ್ 29 ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಈ 3 ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.