Job Description: * ಪ್ರಸ್ತುತ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿರುವ ಕೋವಿಡ್-19 ಲಸಿಕೆಗಳ ಪರಿಗಣಿಸಿ ಇದೀಗ ಕೇಂದ್ರ ಸರ್ಕಾರವು ಕೋವಿಶೀಲ್ಡ್ ಹಾಗೂ ಕೋವಾಕ್ಸಿನ್ ಲಸಿಕೆಯನ್ನು ವಾಣಿಜ್ಯ ರಫ್ತು ಮಾಡಲು ಅನುಮೋದನೆಯನ್ನು ನೀಡಿದೆ ಎಂದು ತಿಳಿದು ಬಂದಿದೆ. * ಪ್ರಸ್ತುತ ಈ ಕೋವಿಡ್-19 ಲಸಿಕೆಗಳನ್ನು ರಫ್ತು ಮಾಡುವದರಿಂದ ದೇಶೀಯ ಲಭ್ಯತೆಗೆ ಯಾವುದೇ ಕೊರತೆಯಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. * ಇಲ್ಲಿಯವರೆಗೆ ಭಾರತ ಸರ್ಕಾರವು ಸರಿ ಸುಮಾರು 100 ದೇಶಗಳಿಗೆ 65 ಮಿಲಿಯನ್ ಡೋಸ್ ಕೋವಿಡ್-19 ಲಸಿಕೆಯನ್ನು ರಫ್ತು ಮಾಡಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. * ಪ್ರಸ್ತುತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ '22.72 ಕೋಟಿಗೂ ಅಧಿಕ ಬಳಕೆಯಾಗದ ಕೋವಿಡ್-19 ಲಸಿಕೆ ಡೋಸ್ಗಳು ಲಭ್ಯವಿವೆ ಎಂದು ತಿಳಿಸಿದ್ದಾರೆ. * ಇತ್ತೀಚಿಗಷ್ಟೇ ಕೇಂದ್ರ ಸರ್ಕಾರವು ನೇಪಾಳ, ತಜಕಿಸ್ತಾನ್ ಹಾಗೂ ಮೊಜಾಂಬಿಕ್ಗೆ 50 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ರಫ್ತು ಮಾಡಲು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಪರವಾನಿಗೆಯನ್ನು ನೀಡಿದೆ.