Job Description: * ಭಾರತ ದೇಶದಲ್ಲಿ ಇದೇ ಮೊದಲ ಬಾರಿಗೆ ಲಿಂಗಾನುಪಾತದಲ್ಲಿ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಅಧಿಕವಾಗಿದೆ ಎಂದು ಸರ್ಕಾರವು ಸಮೀಕ್ಷೆಯ ಅಂಕಿ ಅಂಶಗಳ ಮೂಲಕ ತಿಳಿಸಿದೆ. * ಪ್ರಸ್ತುತ ಭಾರತವು ವಿಶ್ವದಲ್ಲಿ ಜನಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ, ಆದರೆ ಇದೀಗ ಭಾರತದಲ್ಲಿ ಮಕ್ಕಳ ಜನನ ಪ್ರಮಾಣವು ಇಳಿಕೆಯಾಗಿದೆ ಎಂದು ಸರ್ಕಾರದ ಸಮೀಕ್ಷೆಯ ಪ್ರಕಾರ ತಿಳಿದು ಬಂದಿದೆ. * ಇತ್ತೀಚಿಗೆ ಕೇಂದ್ರ ಆರೋಗ್ಯ ಸಚಿವಾಲಯ ಎರಡು ವರ್ಷಗಳ ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆಯನ್ನು ಬಹಿರಂಗ ಪಡಿಸಿದೆ ಅದರ ಪ್ರಕಾರ, 1,000 ಪುರುಷರಿಗೆ 1,020 ಮಹಿಳೆಯರು ಭಾರತ ದೇಶದಲ್ಲಿದ್ದಾರೆ ಎಂದು ತಿಳಿದು ಬಂದಿದೆ. * ಸರ್ಕಾರವು ಈ ಹಿಂದೆ 1876ರಿಂದ ಸಮೀಕ್ಷೆಯನ್ನು ನಡೆಸುತ್ತಿದೆ, ಆದರೆ ಇದೇ ಮೊದಲ ಬಾರಿಗೆ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಅಧಿಕವಾಗಿದೆ ಎಂದು ಸರ್ಕಾರದ ಅಂಕಿ ಅಂಶಗಳ ಮೂಲಕ ತಿಳಿದು ಬಂದಿದೆ. * ಸದ್ಯ ಭಾರತದಲ್ಲಿ 130 ಕೋಟಿ ಜನಸಂಖ್ಯೆ ಇದೆ, ಆದರೆ ವಿಶ್ವಸಂಸ್ಥೆ ಅಂದಾಜಿನ ಪ್ರಕಾರ ಇದೇ ರೀತಿ ಮುಂದುವರೆದರೆ ಈ ದಶಕದ ಅಂತ್ಯದ ವೇಳೆಗೆ ಭಾರತವು ಜನಸಂಖ್ಯೆಯಲ್ಲಿ ಚೀನಾ ದೇಶವನ್ನು ಮೀರಿಸಲಿದೆ ಎಂದಿದ್ದಾರೆ.