Job Description: * ಪ್ರಸ್ತುತ ಕೇಂದ್ರ ಸರ್ಕಾರವು ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ (BMIC) ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಧಾರವಾಡ ಕೈಗಾರಿಕಾ ಪ್ರದೇಶದ ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ. * ಒಟ್ಟಾರೆ '4' ಹಂತಗಳಲ್ಲಿ ಧಾರವಾಡ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸಲು 32 ಯೋಜನೆಗಳನ್ನು ಸಿದ್ದಪಡಿಸಲಾಗಿದೆ, ಒಟ್ಟು 11 ಕೈಗಾರಿಕಾ ಕಾರಿಡಾರ್ಗಳಿಗೆ ಕೇಂದ್ರ ಸರ್ಕಾರವು ಸಮ್ಮತಿಯನ್ನು ನೀಡಿದೆ. * ಕೇಂದ್ರ ಸರ್ಕಾರದ ಈ ಯೋಜನೆಯು ಸರಿ ಸುಮಾರು 6,000 ಎಕರೆಗೂ ಹೆಚ್ಚು ಭೂ ಪ್ರದೇಶದಲ್ಲಿ ವ್ಯಾಪಿಸಿದೆ, ಪ್ರಸ್ತುತ ಕರ್ನಾಟಕ ರಾಜ್ಯದ 2ನೇ ಅತಿದೊಡ್ಡ ಮಹಾನಗರ ಪಾಲಿಕೆಯಾಗಿರುವ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಈ ಯೋಜನೆಯಿಂದಾಗಿ ಕೈಗಾರಿಕೆಗಳಿಗೆ ಉತ್ತಮ ಪ್ರತಿಕ್ರಿಯೇ ದೊರೆಯಲಿದೆ ಎಂದು ತಿಳಿಸಲಾಗಿದೆ.