Job Description: * ಪ್ರಸ್ತುತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಭಾರತ ಸರ್ಕಾರವು 'ಸ್ರೇಷ್ಠ' SRESTHA ಯೋಜನೆಯನ್ನು ಆರಂಭಿಸಲಿದೆ, ಈ ಯೋಜನೆಯು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ವಸತಿ ಶಿಕ್ಷಣವನ್ನು ನೀಡಲಿದೆ ಎಂದು ತಿಳಿಸಿದ್ದಾರೆ. * ಈ ಸ್ರೇಷ್ಠ' SRESTHA ಯೋಜನೆಯನ್ನು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಜಾರಿಗೆ ತರಲಿದೆ, ಈ ಯೋಜನೆಯು ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುತ್ತದೆ, ಈ ಯೋಜನೆ ಅಡಿಯಲ್ಲಿ 9 ರಿಂದ 12 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ವಸತಿ ಶಾಲೆಯನ್ನು ಕಲ್ಪಿಸಲಿದೆ. * ಭಾರತೀಯ ಸಂವಿಧಾನದ ಪಿತಾಮಹ ಡಾ. ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ಭಾರತದ ದೇಶದಲ್ಲಿ ಮಹಾಪರಿನಿರ್ವಾಣ ದಿವಸ್ ಎಂದು ಆಚರಣೆ ಮಾಡಲಾಗುತ್ತದೆ, ಅದುವೇ ಡಿಸೆಂಬರ್. 06 ಆ ದಿನದಂದೇ SRESHTA (ಸ್ರೇಷ್ಠ) ಯೋಜನೆಯನ್ನು ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.