Job Description: * ಪ್ರಸ್ತುತ ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ 'ಜವಾಡ್' ಚಂಡಮಾರುತವು ಒಡಿಶಾ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ಕರಾವಳಿಗೆ ಅಪ್ಪಳಿಸಲಿದೆ ಎಂದು ತಿಳಿಸಿದೆ, ಇದೀಗ ಈ ಎರಡು ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳಲಾಗುತ್ತಿದೆ ಎಂದು ರಾಜ್ಯಗಳು ತಿಳಿಸಿವೆ. * ಈ 'ಜವಾಡ್' ಚಂಡಮಾರುತವು ಅಪ್ಪಳಿಸುವದರಿಂದ ಭಾರೀ ಮಳೆಯಾಗುವ ಸಾಧ್ಯೆತೆಗಳಿವೆ, ತಮಿಳುನಾಡು, ಪಶ್ಚಿಮ ಬಂಗಾಳ, ಅಂಡಮಾನ್-ನಿಕೋಬಾರ್ ದ್ವೀಪ ಸಮೂಹದಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. * ಕರ್ನಾಟಕ ರಾಜ್ಯದಲ್ಲಿಯೂ ಕೂಡ ಈ ಚಂಡಮಾರುತದಿಂದಾಗಿ ಮುಂದಿನ 72 ಗಂಟೆ ಕಾಲ ಮಳೆಯಾಗುವ ಸಾಧ್ಯತೆಗಳಿವೆ, ಹಾಗೂ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.