Job Description: * ಇದೀಗ ತಮಿಳುನಾಡು ರಾಜ್ಯದ ಎಲ್ಲಾ ಸರ್ಕಾರಿ ಉದ್ಯೋಗಗಳಿಗೆ ತಮಿಳು ಭಾಷಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿದ ತಮಿಳುನಾಡು ರಾಜ್ಯ ಸರ್ಕಾರ, ಈ ಮಾಹಿತಿಯನ್ನು ರಾಜ್ಯ ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ ಅವರು ತಿಳಿಸಿದ್ದಾರೆ. * ಪ್ರಸ್ತುತ ತಮಿಳುನಾಡು ರಾಜ್ಯ ಸರ್ಕಾರದ ನೇಮಕಾತಿ ಮಂಡಳಿಯು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳಿಗೆ ತಮಿಳು ಭಾಷೆ ಪರೀಕ್ಷೆಯನ್ನು ಕಡ್ಡಾಯಗೊಳಿಸುವ ಆದೇಶವನ್ನು ಇದೀಗ ತಮಿಳನಾಡು ರಾಜ್ಯ ಸರ್ಕಾರವು ಅಂಗೀಕರಿಸಿದೆ. * ಈ ಆದೇಶದಲ್ಲಿ ನೀಡಿರುವ ಮಾಹಿತಿಯ ಪ್ರಕಾರ 'ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳು ತಮಿಳು ಭಾಷಾ ಪರೀಕ್ಷೆಯಲ್ಲಿ ಕನಿಷ್ಠ ಶೇ. 40 ಅಂಕಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ, ಅಷ್ಟೇ ಅಲ್ಲದೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಪ್ರಾಮುಖ್ಯತೆ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.